ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕಳಂಜ ಬಾಳಿಲ ಸಹಕಾರಿ ಸಂಘಕ್ಕೆ ರೂ 5 ಲಕ್ಷ ಸಹಾಯಧನ

0
196

 

p>

ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸಾರಥ್ಯದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡಕ್ಕೆ ರೂ 5 ಲಕ್ಷ ಸಹಾಯಧನ ಮಂಜೂರಾಗಿದೆ.


ಆ. 1ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಳ್ಯೋಟ್ಟುರವರು ಕಳಂಜ ಬಾಳಿಲ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಕೂಸಪ್ಪ ಗೌಡರಿಗೆ ಧನಾಧೇಶ ಪತ್ರವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪುತ್ತೂರು ಮುಖ್ಯ ಶಾಖೆಯಲ್ಲಿ ನೀಡಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎನ್. ಕರುಣಾಕರ ಶೆಟ್ಟಿ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಮೇಶ ನಾಯಕ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಪುತ್ತೂರು ಮುಖ್ಯ ಶಾಖೆಯ ವ್ಯವಸ್ಥಾಪಕ ರತ್ನ ಕುಮಾರ್, ವಲಯ ಮೇಲ್ವಿಚಾರಕ ಪ್ರದೀಪ್ ಕುಮಾರ್ ಹಾಗೂ ಮನೋಜ್ ಕುಮಾರ್ ಹಾಜರಿದ್ದರು.

LEAVE A REPLY

Please enter your comment!
Please enter your name here