ಕುಕ್ಕಟ್ಟೆಯಲ್ಲಿ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ

0

 

ಮುರುಳ್ಯ ಗ್ರಾಮದ ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರೀ ದೇವಸ್ಥಾನದಲ್ಲಿ ಪ್ರಥಮ ಬಾರಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಿತು.
ದೇವಳದ ಪ್ರಧಾನ ಅರ್ಚಕ ಬಾಲಕೃಷ್ಣ ಪುರೋಹಿತ ಕುಳಾಯಿ, ಸಚಿನ್ ಶರ್ಮ, ನವೀನ್ ಶರ್ಮ ಕಲ್ಲಗದ್ದೆಯವರು ವೈದಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಅನುವಂಶಿಕ ಆಡಳಿತದಾರ ಜನಾರ್ದನ ಆಚಾರ್ಯ ಕುಕ್ಕಟ್ಟೆ, ಆಡಳಿತ ಸಮಿತಿ, ಸೇವಾ ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.