ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

0
386

ಭಾರತೀಯ ಸೇನೆ/ಇತರೆ ಸಮವಸ್ತ್ರ ಸೇವೆಗಳಿಗೆ ಸೇರಬಯಸುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ೨೦೨೨-೨೩ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು(ಬಾಲಕರಿಗೆ ಮಾತ್ರ), ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ.15 ಆಗಿರುತ್ತದೆ.

p>

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಸಾಮಾನ್ಯ ಅರ್ಹತೆಗಳು:
೧. ಅಭ್ಯರ್ಥಿಯು ಕರ್ನಾಟಕ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.5.00 ಲಕ್ಷದೊಳಗಿರಬೇಕು.
೨. ಅಭ್ಯರ್ಥಿಯು ೦೧ ಅಕ್ಟೋಬರ್ ೨೦೦೦ ರಿಂದ ೦೧ ಏಪ್ರಿಲ್ ೨೦೦೫ರ ನಡುವೆ ಜನಿಸಿರಬೇಕು.
೩. ಅಭ್ಯರ್ಥಿಯು ೧೦ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
೪. ತರಬೇತಿ ನೀಡುವ ಸ್ಥಳಗಳು : ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಯಾವುದಾದರೊಂದು ವಸತಿ ಶಾಲೆಯಲ್ಲಿ ನೀಡಲಾಗುತ್ತದೆ.
೫. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿ ಪಡೆಯಲು ಇಚ್ಚಿಸುತ್ತಿರುವ ಆ ಜಿಲ್ಲೆಯ ಜಂಟಿ/ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
೬. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ http://sw.kar.nic.in ನಿಂದ ಪಡೆಯಬಹುದಾಗಿದೆ.
೭. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ.15

LEAVE A REPLY

Please enter your comment!
Please enter your name here