ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

0

 

ಜಾಲ್ಸೂರು ಗ್ರಾಮದ ಕೋನಡ್ಕ ಪದವು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಹಾಗೂ ಕೈತೊಳೆಯುವ ವಿಧಾನದ ಬಗ್ಗೆ ಮಾಹಿತಿ ಕಾರ್ಯಕ್ರಮವು ಆ.6ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಜಲಜಾಕ್ಷಿ ಪಿ. ಕೆ., ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಅವರು ಮಾಹಿತಿಯನ್ನು ನೀಡಿದರು.
ಸಮುದಾಯ ಅರೋಗ್ಯ ಅಧಿಕಾರಿ ರಚನಾ, ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ನಳಿನಿ ಎ .ಎಸ್., ಆಶಾ ಕಾರ್ಯಕರ್ತೆ ಶ್ರೀಮತಿ ಕುಸುಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಕ್ಕಳ ತಾಯಂದಿರು ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಿವೇದಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು. ಸಹಾಯಕಿ ಶಾರದಾ ಸಹಕರಿಸಿದರು.