ಡಾ. ವೀರೇಂದ್ರ ಹೆಗ್ಗಡೆಯವರಿಗೆ ಸೀತಾರಾಮ ರೈಯವರಿಂದ ಸನ್ಮಾನ

0
125

 

p>

 

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕೆ. ಸೀತಾರಾಮ ರೈ ಸವಣೂರು ಅವರು ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಪರವಾಗಿ ಸನ್ಮಾನಿಸಿದರು.
ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಅಭಿನಂದನಾ ಮಾತುಗಳನ್ನಾಡಿದರು.

 

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ
ಉಪಾಧ್ಯಕ್ಷರಾದ ಎನ್. ಸುಂದರ ರೈ ಸವಣೂರು, ನಿರ್ದೇಶಕರುಗಳಾದ
ಎನ್. ರಾಮಯ್ಯ ರೈ ಜೈರಾಜ್ ಭಂಡಾರಿ ಎನ್., ಕಾರ್ಯ ನಿರ್ವಹಣಾಧಿಕಾರಿ ವಸಂತ ಜಾಲಾಡಿ, ಕೇಂದ್ರ ಕಚೇರಿ ವ್ಯಸ್ಥಾಪಕ ಸುನಾದ್ ರಾಜ್ ಶೆಟ್ಟಿ, ಉಜಿರೆ ಶಾಖೆಯ ನಿವೃತ್ತ ವ್ಯವಸ್ಥಾಪಕ ಎಸ್. ಶ್ರೀನಿವಾಸ್ ತಂತ್ರಿ, ಉಜಿರೆ ಶಾಖಾ ಪ್ರಬಂಧಕರಾದ ಕೃಷ್ಣ ಪ್ರಸಾದ್ ಉಡುಪ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ., ಉಪನ್ಯಾಸಕಿ ಪ್ರತಿಭಾ ಎಸ್., ವಿದ್ಯಾರಶ್ಮಿ ವಿದ್ಯಾಲಯದ ಶಿಕ್ಷಕಿ ಶ್ರೀಲೇಖಾ ಶೆಟ್ಟಿ ಎಂ. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here