ಕೆ.ವಿ.ಜಿ. ಪಾಲಿಟೆಕ್ನಿಕ್  : ಕೆ.ವಿ.ಜಿ.ಯವರಿಗೆ ನುಡಿ ನಮನ

0

 

 

ಆಧುನಿಕ ಸುಳ್ಯದ ನಿರ್ಮಾತ್ರ್ , ಶಿಕ್ಷಣ ಕ್ರಾಂತಿಯ ಹರಿಕಾರ ದಿ.ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯ ತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮ ಕೆ.ವಿ.ಜಿ‌.ಪಾಲಿಟೆಕ್ನಿಕ್ ನಲ್ಲಿ ನಡೆಯಿತು.


ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಯವರು ಕೆ.ನಿ.ಜಿಯವರ ತತ್ವ ಆದರ್ಶಗಳ ಬಗ್ಗೆ ಮಾತನಾಡಿ ನುಡಿನಮನ ಸಲ್ಲಿಸಿದರು. ಕಾಲೇಜಿನ ಆಡಳಿತ ಪರಿಷತ್ ಅಧ್ಯಕ್ಷ ಹಾಗೂ ಎ.ಓ.ಎಲ್‌.ಇ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ.ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಕೆ.ವಿ.ಜಿ.ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.