ಪಂಜ: ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

 

ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಜರಗುವ ಶ್ರೀ ಗಣೇಶೋತ್ಸವವು ಆ.31 ರಂದು ಸೆ.1.ರ ತನಕ ವಿವಿಧ ವೈಧಿಕ,ಧಾರ್ಮಿಕ, ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಆ.6 ರಂದು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಆರಾಧನಾ ಸಮಿತಿಯ ಗೌರವಾಧ್ಯಕ್ಷ ಮಾಧವ ಗೌಡ ಜಾಕೆ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.ಸಭಾಧ್ಯಕ್ಷತೆಯನ್ನು ಉತ್ಸವ ಸಮಿತಿಯ ಅಧ್ಯಕ್ಷ ಜಯರಾಮ ಕಲ್ಲಾಜೆ ವಹಿಸಿದ್ದರು.ಆರಾಧನ ಸಮಿತಿಯ ಅಧ್ಯಕ್ಷ ಚಿನ್ನಪ್ಪ ಸಂಕಡ್ಕ,ಉತ್ಸವ ಸಮಿತಿಯ ಕಾರ್ಯದರ್ಶಿ ವಾಸುದೇವ ಮೇಲ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಜಯರಾಮ ಕಲ್ಲಾಜೆ ಸ್ವಾಗತಿಸಿದರು.ವಾಸುದೇವ ಮೇಲ್ಪಾಡಿ ವಂದಿಸಿದರು. ವಿವಿಧ ಸಮಿತಿಗಳ ಸಂಚಾಲಕರು, ಸದಸ್ಯರು, ಆರಾಧನಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here