ಕೆ.ವಿ.ಜಿ. ಕ್ಯಾಂಪಸ್ ಲ್ಲಿ ಡಾ. ಕೆ.ವಿ.ಜಿ. ಸಂಸ್ಮರಣೆ

0

 

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ ಪುಣ್ಯತಿಥಿಯ ಅಂಗವಾಗಿ ಆ. 7ರಂದು ಕೆ.ವಿ.ಜಿ. ಕ್ಯಾಂಪಸ್ ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಕುರುಂಜಿ ಸಂಸ್ಮರಣೆ ನಡೆಯಿತು.

 


ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ, ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾಪ್ರಸಾದ್ ಕೆ.ವಿ, ಕಾರ್ಯದರ್ಶಿಗಳಾದ ಹೇಮನಾಥ್ ಕೆ.ವಿ, ನಿರ್ದೇಶಕರುಗಳಾದ ಶ್ರೀಮತಿ ಶೋಭ ಚಿದಾನಂದ, ಅಕ್ಷಯ್ ಕೆ.ಸಿ, ಡಾ. ಗೌತಮ್ ಗೌಡ, ಕೆ.ವಿ.ಜಿ. ಡೆಂಟಲ್ ಕಾಲೇಜು ಮತ್ತು ಆಧೀನ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಸಿಬ್ಬಂದಿಗಳು, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಸುಳ್ಯದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಡಾ. ಕುರುಂಜಿ ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಪುಷ್ಪ ನಮನ ಸಲ್ಲಿಸಿದರು. ಸ್ಥಾಪಕರ ದಿನಾಚರಣೆ ಸಮಿತಿ ಕಾರ್ಯದರ್ಶಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಎನ್.ಎಂ.ಸಿ. ಪ್ರಾಂಶುಪಾಲರಾದ ರುದ್ರಕುಮಾರ್ ವಂದಿಸಿದರು.

LEAVE A REPLY

Please enter your comment!
Please enter your name here