ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ

0

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆಯನ್ನು ನಿನ್ನೆ ಸಂಜೆ ಪೊಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು.


ಈ ಹಿಂದೆ ನ್ಯಾಯಾಂಗ ಬಂಧನದಲ್ಲಿದ್ದ ಶಫೀಕ್ ಬೆಳ್ಳಾರೆ ಮತ್ತು ಜಾಕೀರ್ ಸವಣೂರು ಅವರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. 5 ದಿನ ಕಳೆದ ಬಳಿಕ ಅವರಿಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಜಾಕೀರ್‌ನನ್ನು ನ್ಯಾಯಾಂಗ ಬಂಧನಕ್ಕೆ ಮತತು ಶಫೀಕ್ ಬೆಳ್ಳಾರೆಯನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ೫ ದಿನಗಳ ಎರಡನೇ ಅವಧಿ ಮುಗಿದ ಬಳಿಕ ನಿನ್ನೆ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾಗ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.