ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಮತ್ತೆ ಇಬ್ಬರು ಆರೋಪಿಗಳ ಬಂಧನ

0

 

 

ಎಲ್ಲ ಆರೋಪಿಗಳ ಗುರುತು ಪತ್ತೆ: ಉಳಿದ ಆರೋಪಿಗಳಿಗಾಗಿ ಶೋಧ: ಎಸ್.ಪಿ.

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಬಂಧಿತರ ಸಂಖ್ಯೆ ಆರಕ್ಕೇರಿದೆ.

 

ಸುಳ್ಯದ ನಾವೂರು ಬಳಿಯ ನಿವಾಸಿ ಆಬಿದ್ ( 22 ) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ ( 28 ) ಬಂಧಿತ ಆರೋಪಿಗಳು.

 

 

ಪ್ರಕರಣದ ತನಿಖೆ ನಡೆಯುತ್ತಿದೆ. ಎಲ್ಲಾ ದಾಳಿಕೋರರನ್ನು ಗುರುತಿಸಲಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ.
ಇದುವರೆಗೆ ನಡೆಸಿದ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here