ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ ಪ್ರದಾನ

0

 

.ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ. ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ ಪ್ರಧಾನ. ಆ.5.ರಂದು ಜರುಗಿದ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆ ಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ ನಡ್ಕ ಹಾಗೂ ಮುಖ್ಯಕಾರ್ಯನಿರ್ವಾಹಣಾ ಧಿಕಾರಿ ಪ್ರಶಾಂತ್ ಜೆ ರವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಮಹಾಬಲ ಕಲ್ಮಡ್ಕ, ಸಿಬ್ಬಂದಿ ಪುನೀತ್ ಕುಮಾರ್ ಎಂ ವಿ ಹಾಗೂ ವಲಯ ಮೇಲ್ವಿಚಾರಕ ಪ್ರದೀಪ್ ಕೆ , ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ ಉಪಸ್ಥಿತರಿದ್ದರು.