ಅರಂತೋಡು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಕುರಿತು ಪೂರ್ವಭಾವಿ ಸಭೆ

0

ಅರಂತೋಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ ಕುರಿತು ಮತ್ತು ಹರ್ ಘರ್ ತಿರಂಗ ಅನುಷ್ಠಾನದ ಕುರಿತು ಪೂರ್ವಭಾವಿ ಸಭೆಯನ್ನು ಆ. 8ರಂದು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಕು. ಶ್ವೇತಾ ವಹಿಸಿದ್ದರು.

ಆ. 15 ರಂದು ಸ್ವಾತಂತ್ರ ಅಮೃತ ಮಹೋತ್ಸವದ ಆಚರಣೆ ಮತ್ತು ಪ್ರತಿ ಮನೆಗೆ ರಾಷ್ಟ್ರಧ್ವಜಗಳ ಹಂಚಿಕೆಯ ಕುರಿತು ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಸುದ್ದಿ ಬಿಡುಗಡೆ ಪತ್ರಿಕೆಯ ಸಂಪಾದಕರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಶಾಲೆಗಳ ಅಧ್ಯಾಪಕರುಗಳು , ಮತ್ತು ಸಾರ್ವಜನಿಕ ರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here