ಗುತ್ತಿಗಾರು ಸಹಕಾರಿ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿ

0

 

ಗುತ್ತಿಗಾರು ಪ್ರಾ.ಕೃ.ಪ.ಸಹಕಾರಿ ಸಂಘಕ್ಕೆ ದ. ಕ. ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯನ್ನು ಆ. 5 ರಂದು ಮಂಗಳೂರಿನಲ್ಲಿ ನಡೆದ ಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನಗೈದರು. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ ಕೆ ಶರತ್ ಪ್ರಶಸ್ತಿ ಸ್ವೀಕರಿಸಿದರು. ಸಹಕಾರಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ನವೀನ್ ಬಾಳುಗೋಡು, ಕುಂಞ ಬಳ್ಳಕ್ಕ, ಅನಂದ ಹಲಸಿನಡ್ಕ ಉಪಸ್ಥಿತರಿದ್ದರು.