ಸುಳ್ಯ ನ್ಯಾಯಾಲಯದಿಂದ ವರ್ಗಾವಣೆಗೊಂಡ ನ್ಯಾಯಾಧೀಶ ಸೋಮಶೇಖರ್ ಎ.ರವರು ಸುಳ್ಯದ ಜನತೆಗೆ ನೀಡಿದ ಕೃತಜ್ಞತೆ

0

 

ಕಳೆದ ಒಂದು ವರ್ಷಗಳಿಂದ ಸುಳ್ಯ ನ್ಯಾಯಾಲಯದಲ್ಲಿ ಹಿರಿಯ ಸಿವಿಲ್ ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ.


ಕಳೆದ ಒಂದು ವರ್ಷಗಳಿಂದ ಇವರು ನೀಡಿದ ಸೇವೆಯಲ್ಲಿ ಸುಳ್ಯದ ಜನತೆಯ ಪ್ರೀತಿಗೆ ಪಾತ್ರರಾದ ಇವರು ಸುಳ್ಯ ತಾಲೂಕಿನಾದ್ಯಂತ ಸಂಚರಿಸಿ ಕಾನೂನು ಅರಿವಿನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಅಧಿಕಾರಿಗಳ ಮತ್ತು ಸಾರ್ವಜನಿಕರ ಪ್ರಶಂಸೆಗೆ ಕಾರಣರಾಗಿದ್ದರು.
ಪತ್ರಿಕಾ ಪ್ರಕಟಣೆ ಮೂಲಕ ಕೃತಜ್ಞತೆ ಸಲ್ಲಿಸಿರುವ ಇವರು ಕಳೆದ ಒಂದು ವರ್ಷಗಳಿಂದ ತನ್ನ ಸೇವಾ ಅವಧಿಯಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸಲು ಸಹಕರಿಸಿದ ಸುಳ್ಯದ ಸಾರ್ವಜನಿಕರು, ತಾಲೂಕು ಆಡಳಿತದ ಎಲ್ಲಾ ಅಧಿಕಾರಿ ವರ್ಗದವರು, ಸುಳ್ಯ ವಕೀಲರ ಸಂಘದ ಅಧ್ಯಕ್ಷರು ಮತ್ತು ಮಾಜಿ ಅಧ್ಯಕ್ಷರು, ಸರ್ವ ಸದಸ್ಯರು, ಸುಳ್ಯ ಬೆಳ್ಳಾರೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ಸುಳ್ಯ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಸುಳ್ಯ ತಾಲೂಕಿನಾಧ್ಯಂತ ಇರುವ ಶಿಕ್ಷಣ ಸಂಸ್ಥೆಗಳ ಆಡಳಿತ ಸಮಿತಿಯ ಮುಖ್ಯಸ್ಥರು ಮತ್ತು ಅಧ್ಯಾಪಕ ವೃಂದದವರು, ಜನಪ್ರತಿನಿಧಿಗಳು ಮತ್ತು ಕಾನೂನು ಅರಿವು ಕಾರ್ಯಕ್ರಮದ ಪ್ರಸಾರ ವಿಭಾಗವನ್ನು ವಹಿಸಿಕೊಂಡು ಅತ್ಯಂತ ಯಶಸ್ವಿ ರೀತಿಯಲ್ಲಿ ಜನರಿಗೆ ಮುಟ್ಟಿಸುವಲ್ಲಿ ಸಹಕರಿಸಿದ ಸುದ್ದಿ ಮಾಧ್ಯಮದವರಿಗೆ, ಇತರ ಮಾಧ್ಯಮ ಮಿತ್ರರು, ಸುಳ್ಯ ನ್ಯಾಯಾಲಯದ ಎಲ್ಲಾ ಹಿರಿಯ ಕಿರಿಯ ಅಧಿಕಾರಿ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಸಂಪೂರ್ಣವಾಗಿ ಸಹಕಾರವನ್ನು ನೀಡಿದ್ದು ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸುವುದಾಗಿ ಸುದ್ದಿ ಪತ್ರಿಕೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here