ಕೃಷಿ ಹಾನಿಗೂ ಸರಕಾರ ವಿಶೇಷ ಪ್ಯಾಕೇಜ್ ನೀಡಲಿ

0

 

ನಿಕಟಪೂರ್ವ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ

 

ಕಲ್ಮಕಾರು, ಕೊಲ್ಲಮೊಗ್ರ, ಯೇನೆಕಲ್ಲು, ಸಂಪಾಜೆ ಭಾಗಗಳಲ್ಲಿ ‌ನೆರೆ ನೀರಿನಿಂದಾಗಿ ಹಾನಿಗೊಳಗಾದ ಕುಟುಂಬಗಳಿಗೆ ಸರಕಾರ ಪರಿಹಾರ ನೀಡಿರುವುದು ಸ್ವಾಗತಾರ್ಹ. ಅದೇ ರೀತಿ ಹಲವಾರು ಕುಟುಂಬಗಳು ಕೃಷಿಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವುದರಿಂದ ಬೆಳೆ ಹಾನಿಯಿಂದ ರೈತರು ಕಂಗಾಲಾಗಿದ್ದಾರೆ. ಸಣ್ಣ ಪುಟ್ಟ ಅಂಗಡಿಗಳನ್ನು, ಹೊಟೆಲ್ ಗಳನ್ನು ನಡೆಸುತ್ತಾ ಜೀವನ ಸಾಗಿಸುತ್ತಿದ್ದು, ನೆರೆನೀರು ಕೃಷಿಕರ ತೋಟಗಳಿಗೆ ನುಗ್ಗಿದ ಪರಿಣಾಮ ಬೆಳೆ ನಾಶವಾಗಿದೆ. ಅಂಗಡಿಗಳಿಗೆ ಮಣ್ಣು‌ಮಿಶ್ರಿತ ನೀರು ನುಗ್ಗಿ ಅಪಾರ ನಷ್ಟ ಉಂಟಾಗಿದೆ. ಹಾಗಾಗಿ ಸಂಬಂಧಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳ ಮೂಲಕ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕೆಂದು ಸುಬ್ರಹ್ಮಣ್ಯ ಕ್ಷೇತ್ರದ ನಿಕಟಪೂರ್ವ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ ಸರಕಾರವನ್ನು ಆಗ್ರಹಿಸಿದ್ದಾರೆ.

ಆ. 2 ರಂದು‌ ಯೇನೆಕಲ್ಲಿನಲ್ಲಿ ನೆರೆ ನೀರಿನಿಂದ ದುರಂತ ಸಂಭವಿಸಿದ ಮನೆಗಳಿಗೆ ಭೇಟಿ ನೀಡಿ, ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ಭಾಗವಹಿಸಿದ್ದಲ್ಲದೆ ಪರಿಹಾರ ಕಾರ್ಯದಲ್ಲಿ ಅಧಿಕಾರಿಗಳು ಹಾಗೂ ಊರವರ ಜತೆ ಅವರು ಶ್ರಮಿಸಿದ್ದರು.

LEAVE A REPLY

Please enter your comment!
Please enter your name here