ಆಲೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ದೇಶಭಕ್ತಿ ಗೀತೆ ಅಭಿಯಾನ

0

 

 

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ‌ ಸುಳ್ಯ ಇದರ ಸಹಯೋಗದಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನ-2022 ರ 8ನೇ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಆಲೆಟ್ಟಿಯಲ್ಲಿ ಆ.9 ರಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ
“ಬಾಲ್ಯದಲ್ಲೆ ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಅಭಿಮಾನ ಮೂಡಿಸಬೇಕು.ದೇಶಭಕ್ತಿ ಗೀತೆ ಅಭಿಯಾನ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲಿ” ಎಂದು ಶುಭ ಹಾರೈಸಿದರು.ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು, ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ,ಭಾವನಾ ಸುಗಮ ಸಂಗೀತ ಬಳಗದ ನಿರ್ದೇಶಕ, ಗಾಯಕ ಕೆ.ಆರ್.ಗೋಪಾಲಕೃಷ್ಣ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಸದಸ್ಯ ರಾಮಚಂದ್ರ ಪಲ್ಲತಡ್ಕ,ಗಾಯಕಿಯರಾದ ಶುಭದಾ ಆರ್.ಪ್ರಕಾಶ್ , ಲಿಪಿ ಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ರೇವತಿ ವಂದಿಸಿದರು.
ಶಿಕ್ಷಕಿ ಶ್ರೀಮತಿ ವೀಣಾ.ಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here