ಜಾಲ್ಸೂರು: ಮನೆ ಮನೆಗೆ ರಾಷ್ಟ್ರಧ್ವಜ ಹಸ್ತಾಂತರ ಅಭಿಯಾನಕ್ಕೆ ಚಾಲನೆ

0

ಈ ಬಾರಿಯ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಪ್ರಯುಕ್ತ ಗ್ರಾಮದ ಪ್ರತೀ ಮನೆ ಮನೆಗೆ ರಾಷ್ಟ್ರಧ್ವಜ ಹಂಚಿಕೆ ಅಭಿಯಾನಕ್ಕೆ ಜಾಲ್ಸೂರು ಗ್ರಾಮ ಪಂಚಾಯತಿ ವಠಾರದಲ್ಲಿ ಆ.10ರಂದು ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಅವರು ರಾಷ್ಟ್ರಧ್ವಜ ಹಂಚಿಕೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಗ್ರಾಮದಲ್ಲಿ ವಿವಿಧ ಸಂಘ ಸಂಸ್ಥೆಗಳು, ಸಂಜೀವಿನಿ ಸಂಘ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರದಿಂದ ರಾಷ್ಟ್ರಧ್ವಜವನ್ನು ಪ್ರತೀ ಮನೆ ಮನೆಗಳಿಗೆ ವಿತರಣೆ ಮಾಡಲಾಗುವುದು ಎಂದು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ಶಿವಪ್ರಸಾದ್ ಕುಕ್ಕಂದೂರು, ವಿಜಯ ಅಡ್ಕಾರು, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಅಬ್ದುಲ್ ಮಜೀದ್ ನಡುವಡ್ಕ, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶ್ರೀಮತಿ ದೀಪಿಕಾ ಅಜಕಳಮೂಲೆ, ಸಂಜೀವಿನಿ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.