ಜಾಲ್ಸೂರು : ಸಂಜೀವಿನಿ ಸಂಘಕ್ಕೆ ರಾಷ್ಟ್ರಧ್ವಜ ಹಸ್ತಾಂತರ

0

 

ಮನೆ ಮನೆಗೆ ಹಂಚುವ ಜವಾಬ್ದಾರಿ ಕೈಗೆತ್ತಿಗೊಂಡ ಸಂಜೀವಿನಿ ಗ್ರಾ.ಪಂ. ಹಾಗೂ ವಿವಿಧ ಸಂಘಸಂಸ್ಥೆಗಳು

75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಅಂಗವಾಗಿ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗಾ ಅಭಿಯಾನ ನಡೆಸುತ್ತಿದ್ದು ಜಾಲ್ಸೂರು ಗ್ರಾಮ ಪಂಚಾಯತಿ ವತಿಯಿಂದ ಸಂಜೀವಿನಿ ಸಂಘ, ಗ್ರಾ.ಪಂ. ಸದಸ್ಯರುಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗ್ರಾಮದ ಪ್ರತೀ ಮನೆಗೆ ರಾಷ್ಟ್ರಧ್ವಜ ಹಂಚಿಕೆ ಮಾಡುವ ಕಾರ್ಯ ತೊಡಗಿಕೊಂಡಿದ್ದಾರೆ.

ಗ್ರಾಮದ ಸುಬ್ರಹ್ಮಣ್ಯ ಸಂಜೀವಿನಿ ಸಂಘದ ಪದಾಧಿಕಾರಿಗಳು ಸೇರಿ ರಾಷ್ಟ್ರಧ್ವಜ ಹೊಲಿದುಕೊಟ್ಟಿದ್ದು, ಇದೀಗ ಸಂಜೀವಿನಿ ಸಂಘ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸದಸ್ಯರುಗಳು ಸೇರಿದಂತೆ ಗ್ರಾಮದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಅವರು ರಾಷ್ಟ್ರಧ್ವಜ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ಪಿ.ಆರ್. ಸಂದೀಪ್ ಕದಿಕಡ್ಕ, ವಿಜಯ ಅಡ್ಕಾರು, ಶಿವಪ್ರಸಾದ್ ಕುಕ್ಕಂದೂರು, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ಗೀತಾ ಅರ್ಭಡ್ಕ, ಶ್ರೀಮತಿ ದೀಪಾ ಅಜಕಳಮೂಲೆ, ಸುಬ್ರಹ್ಮಣ್ಯ ಸಂಜೀವಿನಿ ಸಂಘದ ಅಧ್ಯಕ್ಷೆ ಶ್ರೀಮತಿ ವೇದಾ ಹರೀಶ್ ಶೆಟ್ಟಿ ನೆಕ್ರಾಜೆ, ಎಂ.ಬಿ.ಕೆ. ಸೌಮ್ಯ ಕದಿಕಡ್ಕ ಸೇರಿದಂತೆ ಸಂಜೀವಿನಿ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.