ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಆಗ್ನಿವೀರ್ ರೋಡ್ ರೇಸ್ ಕ್ರೀಡಾಕೂಟದಲ್ಲಿ ಪ್ರಶಸ್ತಿ

0

 

 

 

 

 

೨೦೨೧-೨೨ನೇ ಸಾಲಿನ ಆಗ್ನಿವೀರ್ ರೋಡ್ ರೇಸ್ ಕ್ರೀಡಾಕೂಟವು ಮಡಿಕೇರಿಯಲ್ಲಿ ಆಗಸ್ಟ್ ೭ರಂದು ನಡೆಯಿತು. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯ, ಸುಳ್ಯ ಇದರ ಕಂಪ್ಯೂಟಕ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ತಿಷನ್ ಎ.ಎಂ. ಗುಡ್ಡಗಾಡು ಓಟದಲ್ಲಿ ೧೦೬ ಸ್ಪರ್ಧಾಳುಗಳಲ್ಲಿ ಬೆಳ್ಳಿಯ ಪದಕವನ್ನು ಗಳಿಸಿಕೊಂಡು ನಮ್ಮ ವಿದ್ಯಾ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರನ್ನು ಡಾ. ರೇಣುಕಾಪ್ರಸಾದ್ ಕೆ.ವಿ., ಪ್ರಧಾನ ಕಾರ್ಯದರ್ಶಿಗಳು ಎ.ಒ.ಎಲ್.ಇ(ರಿ), ಡಾ. ಉಜ್ವಲ್ ಯು.ಜೆ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು, ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಡಾ. ಉಮಾಶಂಕರ್ ಕೆ.ಎಸ್., ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ ಮತ್ತು ಕ್ರೀಡಾ ಚಟುವಟಿಕೆಗಳ ಮುಖ್ಯ ಸಂಯೋಜಕರಾದ ಪ್ರೊ. ಅಜಿತ್ ಬಿ.ಟಿ. ಅಭಿನ೦ದಿಸಿದ್ದಾರೆ.

 

LEAVE A REPLY

Please enter your comment!
Please enter your name here