ಸುಬ್ರಹ್ಮಣ್ಯ  ಕುಮಾರಸ್ವಾಮಿ ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ಉದ್ಘಾಟನೆ

0

 

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ
ವಿದ್ಯಾಲಯದಲ್ಲಿ ಆ.10 ರಂದು ಸಂಸ್ಕೃತ ಸಪ್ತಾಹ ಕಾರ್ಯಕ್ರಮವು ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಮಠಾಧಿಪತಿ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಿರಂತರವಾಗಿ ಏಳು ದಿನ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ್ ನಾಯರ್, ಆಡಳಿತ ಮಂಡಳಿ ಸದಸ್ಯ ಯಜ್ಞೇಶ್ ಆಚಾರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಕೃತ ಶಿಕ್ಷಕಿ ಪ್ರಮೀಳಾ ರವರು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here