ನಿಂತಿಕಲ್ಲು: ಶ್ರೀ ಪರಿವಾರ ಪಂಚಲಿಂಗೇಶ್ವರ ಐ.ಟಿ.ಐ.ನಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

0

p>

ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ನಿಂತಿಕಲ್ಲು ಇದರಲ್ಲಿ 2020 -22 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭ ಆಗಸ್ಟ್ 8 ರಂದು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ್ ತೋಟ ವಹಿಸಿಕೊಂಡಿದ್ದರು.

.ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ ಕೂವೆಂಜ ಭಾಗವಹಿಸಿದ್ದರು. ಎರಡು ವರ್ಷಗಳ ಕಾಲ ಕೈಗಾರಿಕೆ ತರಬೇತಿ ಕೇಂದ್ರದಲ್ಲಿ ತಾಂತ್ರಿಕ ವಿಭಾಗದ ತರಬೇತಿಯನ್ನು ಪೂರ್ಣಗೊಳಿಸಿ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಶುಭಹಾರೈಸಿದರು. ಉದ್ಯೋಗ ನೇಮಕಾತಿ ಅಧಿಕಾರಿಯಾದ ಶೇಖರ್ ಕುದ್ದಾಜೆ ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಹಾಗೂ ಹಿರಿಯ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಹಿರಿಯ ವಿದ್ಯಾರ್ಥಿಗಳು ತಮ್ಮ ಎರಡು ವರ್ಷದ ತರಬೇತಿ ಅವಧಿಯ ಅನುಭವವನ್ನು ಈ ಸಮಾರಂಭದಲ್ಲಿ ಹಂಚಿಕೊಂಡರು. ಸಭಾಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರು ಎರಡು ವರ್ಷಗಳ ಕಾಲ ತಮ್ಮ ಸಂಸ್ಥೆಯಲ್ಲಿ ಸಂಪೂರ್ಣವಾದ ತರಬೇತಿಯನ್ನು ಪಡೆದ ವಿದ್ಯಾರ್ಥಿಗಳ ಮುಂದಿನ ಭವಿಷ್ಯ ಉತ್ತಮವಾಗಿ ರೂಪಿಸಿಕೊಳ್ಳಿ ಎಂದು ಶುಭಹಾರೈಸಿದರು. ಕಾರ್ಯಕ್ರಮಕ್ಕೆ ರಂಜಿತ್ ಎಸ್ .ಆರ್ ಸ್ವಾಗತಿಸಿ ,ಉಮರ್ ಫಾರೂಕ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯಕ್ರಮ ಅಧಿಕಾರಿಯಾದ ಪ್ರಸನ್ನ ವೈ.ಟಿ ನಿರೂಪಿಸಿದರು. ವೇದಿಕೆಯಲ್ಲಿ ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿಯಾದ ರೂಪ ಪಿ.ಜೆ ,ತರಬೇತಿ ಅಧಿಕಾರಿಯಾದ ಸುಧೀರ್ ಎಂ.ವಿ ಹಾಗೂ ಎಲ್ಲಾ ಅಧ್ಯಾಪಕ,ಸಿಬ್ಬಂದಿಗಳು ಹಾಗೂ ಎಲ್ಲಾ ಕಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here