ಪ್ರವೀಣ್ ನೆಟ್ಟಾರು ಹತ್ಯೆ : ಪ್ರಮುಖ ಮೂವರು ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

0

 

 

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ರವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಇಂದು ತಲಪಾಡಿಯಲ್ಲಿ ಬಂಧಿತರಾಗಿದ್ದ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಜ್ ಅಂಕತ್ತಡ್ಕ (27), ಬಶೀರ್ ಎಲಿಮಲೆ (28) ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ತನಿಖಾಧಿಕಾರಿಗಳು ಅರ್ಜಿ ಸಲ್ಲಿಸಿದರು. ಆಗಸ್ಟ್ 16ರವರೆಗೆ ಆರು ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು.

LEAVE A REPLY

Please enter your comment!
Please enter your name here