ಸುಳ್ಯದ ರೋಟರಿ‌ ವಿದ್ಯಾಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಅರಿವು ಮತ್ತು ಶೈಕ್ಷಣಿಕ ಮಾಹಿತಿ ಕಾರ್ಯಗಾರ

0

 

ಸುಳ್ಯದ ರೋಟರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ‘ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಅರಿವು ಮತ್ತು ಶೈಕ್ಷಣಿಕ ಮಾಹಿತಿ ಕಾರ್ಯಗಾರ’ ಆ.11 ರಂದು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ ಅಧ್ಯಕ್ಷ ರೊ. ಚಂದ್ರಶೇಖರ ಪೇರಾಲ್ ರವರು ವಹಿಸಿದರು. ಸಂಸ್ಥೆಯ ಸಂಚಾಲಕ ರೊ. ಗಿರಿಜಾಶಂಕರ್ ರವರು ಶುಭ ಹಾರೈಸಿದರು. ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿಯವರು ಸ್ವಾಗತಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಮೌಸಮಿ ವಂದಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ದೀಕ್ಷಿತಾ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದಿಶಾ ಕಾರ್ಯಕ್ರಮ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನೀಟ್ ಟ್ರೈನರ್ ಶ್ರುತಕೀರ್ತಿ ಮಂಗಳೂರು, ಇವರು ಮಾಹಿತಿ ನೀಡಿದರು. ಟ್ರಸ್ಟಿಗಳಾದ ರೊ. ದಯಾನಂದ ಆಳ್ವ, ರೊ. ಮಹಾಲಕ್ಷ್ಮಿ ಕೊರಂಬಡ್ಕ, ಹಾಗೂ ಸಂಸ್ಥೆಯ ಹೈಸ್ಕೂಲ್ ವಿಭಾಗದ ಮುಖ್ಯ ಶಿಕ್ಷಕಿ ವೀಣಾ ಶೇಡಿಕಜೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಹರೀಣಾಕ್ಷಿ , ನಿವೃತ್ತ ಮುಖ್ಯಶಿಕ್ಷಕ ಅಚ್ಯುತ ಅಟ್ಲೂರ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯ ಕ್ರಮದ ಕೊನೆಗೆ ಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳಿಂದ ನಿವೃತ್ತ ಮುಖ್ಯ ಶಿಕ್ಷಕ ಅಚ್ಯುತ ಅಟ್ಲೂರ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.