ಅಲೆಕ್ಕಾಡಿ ಶಾಲೆಗೆ ಮುಖ್ಯ ಶಿಕ್ಷಕಿಯಾಗಿ ವರ್ಗಾವಣೆಗೊಂಡ ಶಶಿಕಲಾರಿಗೆ ಬೀಳ್ಕೊಡುಗೆ

0
372

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರದಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಶಶಿಕಲಾರವರು ಮುಖ್ಯ ಶಿಕ್ಷಕಿಯಾಗಿ ಭಡ್ತಿ ಪಡೆದು ಅಲೆಕ್ಕಾಡಿ ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 11ರಂದು ಮುರುಳ್ಯ ಶಾಂತಿನಗರ ಶಾಲೆಯಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಿನೇಶ್ ನಡುಬೈಲು ವಹಿಸಿದ್ದರು. ಸನ್ಮಾನ ಕಾರ್ಯಕ್ರಮವನ್ನು ನಿವೃತ್ತ ಉಪನ್ಯಾಸಕರಾದ ಜಯರಾಜ ಆಚಾರ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ, ಉಪಾಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ, ಗ್ರಾಮ್ ಪಂಚಾಯತ್ ಸದಸ್ಯರಾದ ಶೀಲಾವತಿ ಗೋಳ್ತಿಲ, ರಂಗಮಂದಿರ ದಾನಿಗಳಾದ ಶಿವಪ್ಪ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಸಂತ ನಡುಬೈಲು, ಹಿರಿಯ ವಿದ್ಯಾರ್ಥಿ ಹಾಗೂ ದಾನಿಗಳಾದ ಮಾಯಿಲಪ್ಪ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ, ಮುಖ್ಯ ಶಿಕ್ಷಕಿ ಶ್ರೀಮತಿ ಪದ್ಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಬೇಬಿ ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಸರೋಜಿನಿ ಕೆ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ಸರಿತಾ ವಂದಿಸಿದರು. ಈ ಸಂದರ್ಭದಲ್ಲಿ ಶಶಿಕಲಾರವರು ಶಾಲೆಗೆ ಕ್ರೀಡಾ ಸಾಮಗ್ರಿ ಮತ್ತು ಮೊಮೆಂಟೊ ಸ್ಟ್ಯಾಂಡನ್ನು ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here