ಬೆಳ್ಳಾರೆ : ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

 

ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಬೆಳ್ಳಾರೆ ಮತ್ತು ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ಇದರ ವತಿಯಿಂದ ನಡೆಯುವ 51 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.11 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

 

ಈ ಸಂದರ್ಭದಲ್ಲಿ ವಿರಾಟ್ ಫ್ರೆಂಡ್ಸ್ ಅಧ್ಯಕ್ಷ ಮನೋಜ್ ಶೆಟ್ಟಿ, ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆ, ವಿರಾಟ್ ಫ್ರೆಂಡ್ಸ್ ತಂಡದ ಸದಸ್ಯರು ಉಪಸ್ಥಿತರಿದ್ದರು.