ಆ.15: ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ದೇಶಭಕ್ತಿ ಗೀತ ಗಾಯನ

0

 

ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಪ್ರಯುಕ್ತ ವಿನೂತನ ಕಾರ್ಯಕ್ರಮ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಪ್ರಯುಕ್ತ ಭಾವನಾ ಸುಗಮ ಸಂಗೀತ ಬಳಗದ ವತಿಯಿಂದ ದೇಶ ಭಕ್ತಿ ಗೀತ ಗಾಯನ ಕಾರ್ಯಕ್ರಮವು ಆ.15ರವರೆಗೆ ಜರುಗಲಿದೆ.
ಮಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆಯುವ ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್ ಅವರು ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾಸಂಸ್ಥೆಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಂಗಳೂರಿನ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿರಲಿದ್ದಾರೆ.