ದೇಶ ಭಕ್ತಿಗೀತೆ ಗಾಯನ ಅಭಿಯಾನ-2022

0

 

 

 

ಸಮಾರೋಪ ಮತ್ತು ಸನ್ಮಾನ ಸಮಾರಂಭ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಭಾವನಾ ಸುಗಮ ಸಂಗೀತ ಬಳಗ(ರಿ.) ಸುಳ್ಯ ಇವರ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ವಿವಿಧ ವಿದ್ಯಾಲಯಗಳಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನದ ಸಮಾರೋಪ ಮತ್ತು ಸನ್ಮಾನ ಸಮಾರಂಭ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಿತು.


ಸಮಾರಂಭದ ಅಧ್ಯಕ್ಷತೆ ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ದಶೇಖರ ಪೇರಾಲು “ಸ್ವಾತಂತ್ರ್ಯದ ನಿಜ ಅರ್ಥವನ್ನು ಅರಿಯುವಲ್ಲಿ ಈಗ ನಾವು ವಿಫಲರಾಗಿದ್ದೇವೆ.ನಮ್ಮ ನಾಡು-ಸಂಸ್ಕೃತಿ-ಭಾಷೆಗಳ ಉಳಿವು ಈಗಿನ ವಿದ್ಯಾರ್ಥಿಗಳ ಕೈಯಲ್ಲಿದೆ.ದೇಶಭಕ್ತಿ ಎಂಬುದು ಕೇವಲ ತೋರಿಕೆಯಾಗಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ದೇಶಭಕ್ತಿಯ ಸ್ಫೂರ್ತಿ ನೀಡಬೇಕೆಂಬ ಉದ್ದೇಶದಿಂದ ತಾಲೂಕಿನ 10 ವಿದ್ಯಾಲಯಗಳಲ್ಲಿ ಈ ಅಭಿಯಾನವನ್ನು ನಾವು ಹಮ್ಮಿಕೊಂಡಿದ್ದೇವೆ.ದೇಶಭಕ್ತಿ ಗೀತೆಗಳ ಗಾಯನ ನಮ್ಮ ದೇಶ-ಭಾಷೆ-ಸಂಸ್ಕೃತಿ ಕಡೆಗೆ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಲು ನೆರವಾದರೆ ನಮ್ಮ ಶ್ರಮ ಸಾರ್ಥಕ” ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಟ ಮಾತನಾಡಿ “ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ದೇಶಭಕ್ತಿ ಗೀತೆ ಗಾಯನ ಅಭಿಯಾನದ ಮೂಲಕ ಜಿಲ್ಲೆಗೆ ಮಾದರಿಯಾಗಿದೆ.ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ” ಎಂದು ಪರಿಷತ್ತಿನ ಶ್ರಮವನ್ನು ಶ್ಲಾಘಿಸಿದರು.


ನೆಲ್ಲೂರು ಕೆಮ್ರಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವಿಷ್ಣು ಭಟ್ ಮಾತನಾಡಿ “ದೇಶಭಕ್ತಿ ಗೀತೆ ಗಾಯನ ಅಭಿಯಾನ ಮತ್ತೆ ನಮ್ಮೆಲ್ಲರನ್ನು ದೇಶದ ಬಗ್ಗೆ ಚಿಂತಿಸುವಂತೆ ಮಾಡಿದೆ.ದೇಶ ಎದುರಿಸುತ್ತಿರುವ ಸವಾಲುಗಳ ಬಗ್ಗೆ ನಾವು ಜಾಗೃತರಾಗಬೇಕು.ವಿದ್ಯಾರ್ಥಿಗಳು ನಮ್ಮ ದೇಶ-ಸಂಸ್ಕೃತಿಯ
ಸಂಪೂರ್ಣ ಜ್ಞಾನವನ್ನು ಹೊಂದಿರಬೇಕು” ಎಂದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಯಂತ ಹರ್ಲಡ್ಕ ಮಾತನಾಡಿ ಕಾರ್ಯಕ್ರಮ ಆಯೋಜಿಸಿದ ಸಾಹಿತ್ಯ ಪರಿಷತ್ತಿಗೆ ಧನ್ಯವಾದ ಸಲ್ಲಿಸಿದರು.
ಭಾವನಾ ಬಳಗದ ನಿರ್ದೇಶಕರಾದ ಕೆ.ಆರ್.ಗೋಪಾಲಕೃಷ್ಣ,
ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು,ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ದಯಾನಂದ ಆಳ್ವ,ಸದಸ್ಯರಾದ ಯೋಗೀಶ್ ಹೊಸೊಳಿಕೆ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾಕುಮಾರ್ ,ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಲೀಲಾಧರ್ ಹಾಗೂ ಅಚ್ಚುತ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾಲೂಕಿನ 10 ವಿದ್ಯಾಲಯಗಳಲ್ಲಿ ನಡೆದ ದೇಶಭಕ್ತಿ ಗೀತೆ ಗಾಯನ ಅಭಿಯಾನದ ನೇತೃತ್ವ ವಹಿಸಿದ ಭಾವನಾ ಸುಗಮ ಸಂಗೀತ ಬಳಗದ ನಿರ್ದೇಶಕರಾದ ಕೆ.ಆರ್.ಗೋಪಾಲಕೃಷ್ಣ ಹಾಗೂ ಸಹ ಗಾಯಕಿಯರಾದ ಕುಮಾರಿ ಶುಭದಾ ಆರ್ ಪ್ರಕಾಶ್ ಮತ್ತು ಕುಮಾರಿ ಲಿಪಿ ಶ್ರೀ ಯವರನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಶಾಲಾ ಸಹ ಶಿಕ್ಷಕ ಸುಂದರ ಧನ್ಯವಾದಗೈದರು.ಶಿಕ್ಷಕ ವಸಂತ ಕಾರ್ಯಕ್ರಮ ನಿರೂಪಿಸಿದರು.