ಎನ್ನೆಂಸಿ : ರಾಷ್ಟ್ರ ಧ್ವಜ ಬಳಕೆ ಮಾಹಿತಿ ಮತ್ತು ವಿತರಣಾ ಕಾರ್ಯಕ್ರಮ

0

 

75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ದ ಅಂಗವಾಗಿ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಆ.12ರಂದು ರಾಷ್ಟ್ರ ಧ್ವಜವನ್ನು ಕಾಲೇಜಿನಲ್ಲಿ ವಿತರಣೆ ಮಾಡಲಾಯಿತು.

ಸಂಸ್ಥೆಯ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಕಾರ್ಯಕ್ರಮದ ಪ್ರಾಮುಖ್ಯತೆ ತಿಳಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ,ಬೋಧಕ -ಬೋಧಕೇತರ ವೃಂದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.