ಸುಳ್ಯ ಎನ್ನೆ oಪಿಯುಸಿಯಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ

0

 

ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಡೆದ ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಧ್ವಜಗೀತೆ, ರಾಷ್ಟ್ರ ಗೀತೆ ಮತ್ತು ವಂದೇ ಮಾತರಂ ಗೀತೆ ಬರೆಯುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸುಳ್ಯದ ನೆಹರು ಮೆಮೋ ರಿಯಲ್ ಪಪೂ ಕಾಲೇಜಿನಲ್ಲಿ ನಡೆಯಿತು.

 

ಕಾಲೇಜಿನ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ಪರ್ಧೆಗಳಲ್ಲಿ ಎಲ್ಲರೂ ಭಾಗವಹಿಸುವುದರ ಮೂಲಕ ತಮ್ಮನ್ನು ತೊಡಗಿಸಿಕೊಳ್ಳಬೇಕು. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ ಮಾಡಿಕೊಡುತ್ತದೆ ಎಂದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪನ್ಯಾಸಕಿ ಗೀತ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಕು. ಬೇಬಿ ವಿದ್ಯಾ ಪಿಬಿ ಸ್ವಾಗತಿಸಿ, ನಿರೂಪಿಸಿದರು. ಉಪನ್ಯಾಸಕಿ ಗೀತ ವಂದಿಸಿದರು.

LEAVE A REPLY

Please enter your comment!
Please enter your name here