ದುಗ್ಗಲಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಸ್ವಾತಂತ್ರ್ಯ ನಡಿಗೆ

0

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ವತಿಯಿಂದ ಸುದ್ದಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ದುಗ್ಗಲಡ್ಕದ ಯುವಕ ಮಂಡಲದ ಕಟ್ಟಡದ ಮುಂಭಾಗದಲ್ಲಿ ಧ್ವಜಾರೋಹಣ ನಡೆದು ಬಳಿಕ ಸ್ವಾತಂತ್ರ್ಯ ನಡಿಗೆ ನಡೆಯಲಿದೆ.
ಪೂ‌.9 ಕ್ಕೆಧ್ವಜಾರೋಹಣವನ್ನು ದುಗ್ಗಲಡ್ಕ ಹಾಲು ಸೊಸೈಟಿಯ ಮಾಜಿ ಅಧ್ಯಕ್ಷೆ ಶ್ರೀಮತಿ ವಾರಿಜ ಕೊರಗಪ್ಪ ನೆರವೇರಿಸಲಿದ್ದಾರೆ. ನ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬಳಿಗ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ದುಗ್ಗಲಡ್ಕ ಪೇಟೆಯಲ್ಲಿ ನಡೆಯಲಿದೆ. ಮೆರವಣಿಗೆಯಲ್ಲಿ ಸಂಘ ಸಂಸ್ಥೆಗಳ ಸದಸ್ಯರು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here