ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

1

 

ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರು 2021 -22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 98 ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 95 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾವಾರು ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸ್ವ ವಿವರ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಭಾವಚಿತ್ರ ಮತ್ತು ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿಯನ್ನು ಪ್ರತಿಭಾ ಪುರಸ್ಕಾರ ವಿಭಾಗ ನಾಡಪ್ರಭು ಕೆಂಪೇಗೌಡ ಭವನ ರಾಜ್ಯ ಒಕ್ಕಲಿಗರ ಸಂಘ ವಿ.ವಿ ಪುರಂ ಕೆ.ಆರ್ ರಸ್ತೆ‌ ಬೆಂಗಳೂರು – 04 ವಿಳಾಸಕ್ಕೆ ಅಂಚೆ ಮೂಲಕ ಅಥವಾ ಸುಳ್ಯದ ಕೆ.ವಿ.ಜಿ ಪಾಲಿಟೆಕ್ನಿಕ್ ನ ಪ್ರಥಮ ಮಹಡಿಯಲ್ಲಿರುವ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರ ಆಡಳಿತ ಕಚೇರಿಗೆ ಆ. 25ರ ಒಳಗೆ ಮುಖತಃ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ .ವಿ ಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

1 COMMENT

LEAVE A REPLY

Please enter your comment!
Please enter your name here