ಹರ್ ಘರ್ ತಿರಂಗ್ ಕಾರ್ಯಕ್ರಮದ ಪೂರ್ವಭಾವಿಯಾಗಿ ಸುಳ್ಯ ನ್ಯಾಯಾಲಯದ ಸಿಬ್ಬಂದಿಗಳಿಗೆ ಧ್ವಜ ವಿತರಣೆ

0

 

p>

ಕೇಂದ್ರ ಸರ್ಕಾರ, ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಪ್ರಾಧಿಕಾರ, ಹಾಗೂ ಉಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ 75 ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರಧ್ವಜ ವಿತರಣಾ ಕಾರ್ಯಕ್ರಮ ಇಂದು ಸುಳ್ಯ ನ್ಯಾಯಾಲಯದ ಆವರಣದಲ್ಲಿ ನಡೆಯಿತು.


ಸುಳ್ಯ ನ್ಯಾಯಾಲಯದ ಕಿರಿಯ ನ್ಯಾಯಾಧೀಶರು ಧ್ವಜವನ್ನು ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದ ನಂತರ ಎಲ್ಲಾ ಸಿಬ್ಬಂದಿ ವರ್ಗದವರಿಗೆ ರಾಷ್ತ್ರ ದ್ವಜವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್, ಶಿರಸ್ತೆದಾರರಾದ ಶಶಿಕಲಾ, ರಘುನಾಥ್
ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here