ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸುಳ್ಯ ನಗರದಲ್ಲಿ ಅದ್ದೂರಿಯಾಗಿ ನಡೆದ ಮಾನವ ಸರಪಳಿ

0

 

 

 

 

ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸುಳ್ಯ ನಗರ ವ್ಯಾಪ್ತಿಯಲ್ಲಿ ಮಾನವ ಸರಪಳಿ ಇಂದು ಮುಂಜಾನೆ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ, ಆಯುರ್ವೇದ ಕಾಲೇಜು ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ

ಬೆಳಗ್ಗೆ 9 ಗಂಟೆಗೆ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ನಗರ ಪಂಚಾಯತ್ ನೇತೃತ್ವದಲ್ಲಿ ಮಾನವ ಸರಪಳಿ ಗೆ ಚಾಲನೆ ನೀಡಲಾಯಿತು. ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಹಾಗೂ ಮುಖ್ಯ ಅಧಿಕಾರಿ ಸುಧಾಕರ್ ಎಂ ಹೆಚ್ ಸ್ವಾತಂತ್ರ್ಯೋತ್ಸವದ ಟ್ಯಾಬ್ಲೊ ಏರಿ, ರಾಷ್ಟ್ರಧ್ವಜವನ್ನು ಕೈಯಲ್ಲಿ ಹಿಡಿದು ನಗರದಲ್ಲಿ ಸಾಗಿದರು.

ಸುಳ್ಯ ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿದ್ಯಾಸಂಸ್ಥೆ ಗಳ ಮುಖ್ಯಸ್ಥರು ರಸ್ತೆಯ ಎರಡೂ ಬದಿಯಲ್ಲಿ ರಾಷ್ಟ್ರಧ್ವಜ ಹಿಡಿದು, ರಾಷ್ಟ್ರ ಘೋಷಣೆ ಕೂಗುತ್ತಿದ್ದರು.

ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ಲಯನ್ಸ್ ಸಭಾಭವನದ ಮುಂಭಾಗದಲ್ಲಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ಹೊರಟ ಟ್ಯಾಬ್ಲೊ ಶ್ರೀರಾಂ ಪೇಟೆ ಮುಖ್ಯರಸ್ತೆಯಲ್ಲಿ ಸಾಗಿ ಗಾಂಧಿನಗರಕ್ಕೆ ತೆರಳಿತು. ಅಲ್ಲಿಂದ ತಿರುಗಿ ರಥಬೀದಿಯಾಗಿ ಸಾಗಿದ ಸ್ವಾತಂತ್ರ್ಯ ರಥ ಎಪಿಎಂಸಿ ರಸ್ತೆ, ತಾಲೂಕು ಕಚೇರಿ ಮುಂಭಾಗ, ಮೆಸ್ಕಾಂ ರಸ್ತೆಯಾಗಿ, ಅಲ್ಲಿಂದ ಕೆ.ವಿ.ಜಿ. ಆಯುರ್ವೇದ ಕಾಲೇಜು ರಸ್ತೆಯಾಗಿ ಸಾಗಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಸಹಿತ ಹಲವು ಮಂದಿ ಗಣ್ಯರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಮಾನವ ಸರಪಳಿಯಲ್ಲಿ ಭಾಗವಹಿಸಿದರು.

 

 


ಕೆವಿಜಿ ಕ್ಯಾಂಪಸ್ ಜಂಕ್ಷನ್

ಆಯುರ್ವೇದ ಕಾಲೇಜು ರಸ್ತೆ


 

 

ಎಂಬಿ ಫೌಂಡೇಶನ್ ಅಧ್ಯಕ್ಷ ಎಂ ಬಿ ಸದಾಶಿವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೈಜೋಡಿಸಿದರು.

ಪಯಸ್ವಿನಿ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ ಮಾಲಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುಳ್ಯ ಬಿ ಎಂ ಎಸ್ ಆಟೋ ಚಾಲಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸದಸ್ಯರು, ಸ್ಥಳೀಯ ಉದ್ಯಮಿಗಳು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗಾಂಧಿನಗರ ಮದರಸ ಅಧ್ಯಾಪಕರುಗಳು, ಜಮಾತ್ ಕಮಿಟಿಯ ಸದಸ್ಯರು, ಪೊಲೀಸ್ ಸಿಬ್ಬಂದಿ ವರ್ಗದವರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.