ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಭಾರತದ ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವದ ಪ್ರಯುಕ್ತ ಗ್ರಾಮದ ಪ್ರತಿ ಮನೆ ಮನೆಯಲ್ಲಿಯೂ ರಾಷ್ಟ್ರಧ್ವಜವನ್ನು ಹಾರಿಸುವ ಹಾಗೂ ಇಳಿಸುವ ಸಂದರ್ಭದಲ್ಲಿ ಧ್ವಜ ಸಂಹಿತೆಯನ್ನು ಅನುಸರಿಸುವ ಬಗ್ಗೆ ಝೂಮ್ ಮೀಟಿಂಗ್ ಮೂಲಕ ಗ್ರಾಮಸ್ಥರಿಗೆ ಮಾಹಿತಿ ನೀಡಲಾಯಿತು.
ಝೂಮ್ ಮೀಟಿಂಗ್ ನಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.