ಸಚಿವ ಎಸ್. ಅಂಗಾರರಿಂದ ತಿರಂಗಾ ಯಾತ್ರೆಗೆ ಚಾಲನೆ – ತಹಶೀಲ್ದಾರ್ ಅನಿತಾಲಕ್ಷ್ಮಿ ಸೇರಿದಂತೆ ಗಣ್ಯರ ಉಪಸ್ಥಿತಿ
ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆಯ ಪ್ರಯುಕ್ತ ಬೃಹತ್ ಕಾಲ್ನಡಿಗೆಯ ತಿರಂಗಾ ಯಾತ್ರೆಯು ಜಾಲ್ಸೂರಿನಿಂದ ಪ್ರಾರಂಭಗೊಂಡಿದೆ.
ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ಆ.13ರಿಂದ ಆ.15ರವರೆಗೆ “ಹರ್ ಘರ್ ತಿರಂಗಾ” ಅಭಿಯಾನವನ್ನು ಕೈಗೊಂಡಿದ್ದು, ಮೊದಲ ದಿನವಾದ ಆ.13ರಂದು ಬೆಳಿಗ್ಗೆ ಜಾಲ್ಸೂರಿನಲ್ಲಿ ತಿರಂಗಾ ಯಾತ್ರೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ
ಅವರು ಚಾಲನೆ ನೀಡಿದರು.
ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್ ಅವರು ರಾಷ್ಟ್ರಧ್ವಜವನ್ನು ಸಚಿವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ತಹಶಿಲ್ದಾರ್ ಕು. ಅನಿತಾಲಕ್ಷ್ಮಿ, ವಿವೇಕಾನಂದ ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ. ಸೀತಾರಾಮ, ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಆಚಾರ್ಯ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ, ನಿವೃತ್ತ ಮುಖ್ಯೋಪಾಧ್ಯಾಯ ಗೋಪಾಲರಾವ್ , ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಪಿ.ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ ಸೇರಿದಂತೆ ಜನಪ್ರತಿನಿಧಿಗಳು, ಬಿಜೆಪಿ ಸುಳ್ಯ ಮಂಡಲದ ಪ್ರ.ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ, ಸುನಿಲ್ ಕೇರ್ಪಳ, ಹೇಮಂತ್ ಮಠ, ಶಿವಪ್ರಸಾದ್ ಉಗ್ರಾಣಿಮನೆ ಸೇರಿದಂತೆ ಶಾಲಾ ಸಹಶಿಕ್ಷಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ವಿದ್ಯಾಸಂಸ್ಥೆಯ ಮೂರರಿಂದ ಹತ್ತನೇ ತರಗತಿ ವರೆಗಿನ ಪ್ರತಿಯೊಂದು ವಿದ್ಯಾರ್ಥಿಗಳು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿಬಂದರು. ಶಿಶುಮಂದಿರ , ಒಂದು ಮತ್ತು ಎರಡನೇ ತರಗತಿಯ ವಿದ್ಯಾರ್ಥಿಗಳು ಶಾಲಾ ವಾಹನಗಳ ಮೂಲಕ ಸಾಗಿಬಂದರು.