ಜಾಲ್ಸೂರು: ತಾಲೂಕು ಮಟ್ಟದ ಮಕ್ಕಳ ಸ್ನೇಹಿ ಗ್ರಂಥಾಲಯ ವಿಚಾರ ಸಂಕಿರಣ

0
46

75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಸಮಾರೋಪ

p>

ಜಾಲ್ಸೂರು ಗ್ರಾಮ ಪಂಚಾಯತಿ, ಗ್ರಾಮ ಪಂಚಾಯತಿ ಗ್ರಂಥಾಲಯ, ಸುಬ್ರಹ್ಮಣ್ಯ ಸಂಜೀವಿನಿ ಗ್ರಾ.ಪಂ. ಒಕ್ಕೂಟ, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಮಕ್ಕಳ ಸ್ನೇಹಿ ಗ್ರಂಥಾಲಯ ವಿಚಾರ ಸಂಕಿರಣ ಹಾಗೂ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಸಮಾರೋಪ ಸಮಾರಂಭವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆ.13ರಂದು ಜರುಗಿತು.

 


ಗ್ರಾಮ ಪಂಚಾಯತಿ ಸದಸ್ಯೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯೆ ಶ್ರೀಮತಿ ಗೀತಾಗೋಪಿನಾಥ್ ಬೊಳುಬೈಲು ಅವರು ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಸಾವಿತ್ರಿ ಕಣೆಮರಡ್ಕ ಅವರು ಗ್ರಂಥಾಲಯದ ಬಳಕೆಯ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಗ್ರಾ. ಪಂ. ಸದಸ್ಯರುಗಳಾದ ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು , ಮುಜೀಬ್ ಪೈಚಾರು, ಶಿಕ್ಷಣ ಪೌಂಡೇಶನ್ ನ ರಕ್ಷಿತ್, ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ್ ಭಟ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಾಲ್ಸೂರು ಗ್ರಾಮದ ಸೋಣಂಗೇರಿ, ಅಡ್ಕಾರು, ಬೊಳುಬೈಲು, ಕದಿಕಡ್ಕ ಹಾಗೂ ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳು, ಶಿಕ್ಷಕರು , ಅಂಗನವಾಡಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here