ಜಯನಗರ ವಾರ್ಡಿನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ

0

ಸುಳ್ಯ ನಗರ ಪಂಚಾಯತ್ ನೇತೃತ್ವದಲ್ಲಿ ಇಂದು ನಡೆದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮವ ನಗರ ಪಂಚಾಯತ್ ಸದಸ್ಯೆ ಶಿಲ್ಪಾ ಸುದೇವ್ ನೇತೃತ್ವದಲ್ಲಿ ಜಯನಗರ ಪರಿಸರದಲ್ಲಿ ಇಂದು ನಡೆಯಿತು.


ಈ ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ನಾಮನಿರ್ದೇಶಕ ಸದಸ್ಯ ರೋಹಿತ್ ಕೊಯಿಂಗೋಡಿ, ಜಯನಗರ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಲಾವಣ್ಯ ಜಯನಗರ, ಉಪಾಧ್ಯಕ್ಷ ಮುದ್ದಪ್ಪ, ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಜಯನಗರ ಅಂಗನವಾಡಿ ಕಾರ್ಯಕರ್ತೆ, ಆರೋಗ್ಯ ಸಹಾಯಕಿಯರು, ಊರಿನವರು ಭಾಗವಹಿಸಿದ್ದರು.