ಕನಕಮಜಲು: ಆರೋಗ್ಯ ಉಪಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ

0

 

ಕನಕಮಜಲು ಗ್ರಾಮದ ಆರೋಗ್ಯ ಉಪಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಅಂಗವಾಗಿ ಆ.13ರಂದು ರಾಷ್ಟ್ರ ಧ್ವಜಾರೋಹಣ ನಡೆಸಲಾಯಿತು. ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಕು.ಪುಷ್ಪಾವತಿ , ಸಮುದಾಯ ಆರೋಗ್ಯ ಅಧಿಕಾರಿ ಕು.ಪ್ರಿಯಾಂಕ, ಆಶಾ ಕಾರ್ಯಕರ್ತೆಯರಾದ ಭವಾನಿ ಬುಡ್ಲೆಗುತ್ತು ಮತ್ತು ವೀಣಾ ಕುಮಾರಿ ಮತ್ತು ಸ್ಥಳೀಯ ಮಕ್ಕಳು ಹಾಗೂ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.