ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರಿಗೆ ಸರಕಾರಿ ನೌಕರರ ಸಂಘದಿಂದ ಸನ್ಮಾನ

0

 

ಸುಳ್ಯ ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿಯಾಗಿದ್ದು ಜು. 31ರಂದು ನಿವೃತ್ತರಾದ ಮೋಹನ್ ನಂಗಾರು ರವರಿಗೆ ಸುಳ್ಯ ತಾಲೂಕು ಸರಕಾರಿ ನೌಕರರ ಸಂಘದಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.


ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ ಸನ್ಮಾನ ನೆರವೇರಿಸಿದರು. ರಾಜ್ಯ ಪರಿಷತ್ ಸದಸ್ಯ ಪೃಥ್ವಿ ಕುಮಾರ್, ಕಾರ್ಯದರ್ಶಿ ಧನಲಕ್ಷ್ಮಿ, ಪ್ರೌಢಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಿನ್ನಪ್ಪ ಗೌಡ ಪತ್ತುಕುಂಜ ಹಾಗೂ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿದ್ದರು.