ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ

0

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮವು ಆ. 12 ರಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು .

ಸಭೆಯ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ನ ಅಧ್ಯಕ್ಷರಾದ ರೊ.ಕೇಶವಮೂರ್ತಿ ವಹಿಸಿದ್ದರು .ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಗಳಾದ ಡಾ.ಬದ್ರುದ್ದೀನ್ ಎಂ. ಎನ್ ಉಪಸ್ಥಿತರಿದ್ದು ಮಾಹಿತಿ ನೀಡಿದರು .ವೇದಿಕೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್ ಎಂ ,ರೋಟರಿ ಕ್ಲಬ್ ನ ಕಾರ್ಯದರ್ಶಿ ರೊ. ರವೀಂದ್ರ ಉಪಸ್ಥಿತರಿದ್ದು ಶುಭ ಹಾರೈಸಿದರು ,ಸಭೆಯಲ್ಲಿ ರೊ.ಎ ಕೆ .ಮಣಿಯಾಣಿ ರೊ.ಪದ್ಮನಾಭ ಬೀಡು, ರೊ. ವಿನಯಕುಮಾರ್ ,ಆರೋಗ್ಯ ಇಲಾಖೆ ಸಿಬ್ಬಂದಿಗಳು ,ಕ್ಷಯ ರೋಗಿಗಳು ಹಾಜರಿದ್ದರು .ಸುಳ್ಯ ಆರೋಗ್ಯ ಇಲಾಖೆಯ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ, ವಂದಿಸಿದರು .