ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ :ರಾಷ್ಟ್ರ ಧ್ವಜ ಸಹಿತ ಮಾನವ ಸರಪಳಿ ಕಾರ್ಯಕ್ರಮ

0

 

ಭಾರತದ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸರಕಾರದ ವತಿಯಿಂದ ಅನೇಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ನಗರ ಪಂಚಾಯತ್ ಸುಳ್ಯ ಇದರ ನಿರ್ದೇಶನದಂತೆ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಆ. 13 ರಂದು ಬೆಳಿಗೆ 9 ಗಂಟೆಯಿಂದ 9.30ರ ವರೆಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು, ವಿವೇಕಾನಂದ ವೃತ್ತದಿಂದ ಸುಳ್ಯದ ಎ.ಪಿ.ಎಂ.ಸಿಯ ತನಕ ರಾಷ್ಟ್ರಧ್ವಜ ಸಹಿತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.


ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ, ಸಂಸ್ಥೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ. ಯವರು ಹಾಗೂ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here