ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗು ವಾರ್ಷಿಕೋತ್ಸವ

0

 

 

ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಾಗು 2021-22ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮ ಅಮರಜ್ಯೋತಿ ಕುರುಂಜಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು.

 

ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ ಪಶ್ಚಿಮ ವಲಯ ಪೊಲೀಸ್ ಅಧೀಕ್ಷಕರಾದ ಸೈಮನ್ ಸಿ.ಎ. ಕಾರ್ಯಕ್ರಮವನ್ನು ಉದ್ಘಾಟಿಸಿದರು.ಅಕಾಡೆಮಿ‌‌ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.
ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ಕೆವಿಜಿ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಸ್.ಎನ್.ಮನ್ಮಥ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಪಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ‌ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ, ಕೆವಿಜಿ ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ, ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಕೆ, ಉಪ ಪ್ರಾಂಶುಪಾಲ ಶ್ರೀಧರ ಎಂ.ಕೆ, ಕಾಲೇಜಿನ ಅಕಾಡೆಮಿಕ್ ಡೀನ್ ಚಂದ್ರಶೇಖರ ಎಂ.ಎನ್, ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಅನಿಲ್ ಕುಮಾರ್.ಎಸ್, ಹರೀಶ್ ಕೆ.ವಿ, ಎನ್‌ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಸುನಿಲ್ ಕುಮಾರ್ ಎನ್.ಪಿ, ಚಂದ್ರಶೇಖರ ಸಿ,ಉಪನ್ಯಾಸಕರಾದ ಅಣ್ಣಯ್ಯ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್, ಉಪಸ್ಥಿತರಿದ್ದರು.ಶಿಕ್ಷಕ ನಾರಾಯಣ ತೋರಣಗಂಡಿ ಪ್ರಾರ್ಥನೆ ಹಾಡಿದರು, ಕೆವಿಜಿ ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಡಾ.ಯು.ಜೆ.ಸ್ವಾಗತಿಸಿದರು. ಉಪನ್ಯಾಸಕಿ ಶಾಲಿನಿ ಎಂ.ಎಸ್.ವಂದಿಸಿದರು. ಚಂದ್ರಶೇಖರ‌ ಸಿ‌ ಕಾರ್ಯಕ್ರಮ ನಿರೂಪಿಸಿದರು.