ನಿಂತಿಕಲ್ಲು ಶ್ರೀ ಪರಿವಾರ ಪಂಚಲಿಂಗೇಶ್ವರ ಐಟಿಐನಲ್ಲಿ ಧ್ವಜವಂದನೆ

0

ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ಸಂಸ್ಥೆಯ ಎಲ್ಲಾ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳಿಂದ ಧ್ವಜವಂದನೆ ಕಾರ್ಯಕ್ರಮ ನಡೆಯಿತು.

 ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿಗಳು ರಾಷ್ಟ್ರಧ್ವಜಕ್ಕೆ ಗೌರವ ಸೂಚಿಸಿದರ ಮೂಲಕ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು .ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ ತೋಟ , ತರಬೇತಿ ಅಧಿಕಾರಿಯಾದ ಸುಧೀರ್ ಎಂ. ವಿ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ರೂಪ ಪಿ.ಜಿ ಹಾಗೂ ಎಲ್ಲಾ ಅಧ್ಯಾಪಕ ವೃಂದ , ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here