ಸಂಪ್ಯಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ, ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ ಸಪ್ತಾಹ

0

ಸಂಪ್ಯಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ, ಪೌಷ್ಟಿಕ ಆಹಾರ ಪ್ರಾತ್ಯಕ್ಷತೆ ಸಪ್ತಾಹ, ಹೆಣ್ಣು ಮಕ್ಕಳ ಶಿಶುಪ್ರದರ್ಶನ ಹಾಗೂ ಸಂಪ್ಯಾಡಿ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಕುಸುಮಾವತಿಯವರಿಗೆ ಬೀಳ್ಕೊಡುಗೆ ಸಮಾರಂಭ ಆ. 12ರಂದು ನಡೆಯಿತು.
ಕಾರ್ಯಕ್ರಮವನ್ನು ಸ್ತ್ರೀ ಶಕ್ತಿ ಸಂಘಗಳು ಹಾಗೂ ಬಾಲವಿಕಾಸ ಸಮಿತಿಯ ಜಂಟಿ ಆಶ್ರಯದಲ್ಲಿ ನಡೆಸಲಾಯಿತು. ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸೂಂತಾರುರವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಆರೋಗ್ಯ ಇಲಾಖೆಯ ಶ್ರೀಮತಿ ಕವಿತಾಕುಮಾರಿ ತಾಯಂದಿರಿಗೆ, ಗರ್ಭಿಣಿಯರಿಗೆ, ಎದೆ ಹಾಲಿನ ಮಹತ್ವ, ಗರ್ಭಿಣಿ ಬಾಣಂತಿಯರು ಸೇವಿಸುವಂತಹ ಆಹಾರ, ತರಕಾರಿ ಮತ್ತು ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ಮಾಹಿತಿ ನೀಡಿದರು. ಸಿ.ಹೆಚ್.ಒ. ಕು. ಪೃಥ್ವಿ ಸಹಕರಿಸಿದರು. ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯವರಾದಂತಹ ಶ್ರೀಮತಿ ರವಿಶ್ರೀ ಕೆ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಾಲವಿಕಾಸ ಸಮಿತಿ ಸದಸ್ಯರಾದ ವಿಶ್ವನಾಥ ರೈ ಅರ್ಗುಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಪ್ಯಾಡಿ ಕಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ಕುಸುಮಾವತಿ ಉಪಸ್ಥಿತರಿದ್ದು, ಅವರನ್ನು ಫಲಪುಷ್ಪ ನೀಡಿ ಗೌರವಿಸಲಾಯಿತು. ಪೌಷ್ಟಿಕ ಆಹಾರ ಪ್ರಾತ್ಯಕ್ಷತೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರೋತ್ಸಾಹಕ ಬಹುಮಾನ ವಿತರಿಸಲಾಯಿತು. ಹೆಣ್ಣು ಶಿಶು ಪ್ರದರ್ಶನ ನಡೆಸಿ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಂ.ಪಂ. ಸದಸ್ಯೆ ಶ್ರೀಮತಿ ಸುನಿತಾ.ಎಸ್, ಸಂಪ್ಯಾಡಿ ಶಾಲೆಯ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಕವಿತಾ.ಎಸ್, ಅಂಗನವಾಡಿ ಸಹಾಯಕಿ ಮೋಹಿನಿ. ವಿ. ಎಸ್, ಬಳ್ಪ ಆಶಾಕಾರ್ಯಕರ್ತೆ ಶ್ರೀಮತಿ ನೇತ್ರಾವತಿ, ಸ್ತ್ರೀ ಶಕ್ತಿ ಸದಸ್ಯರುಗಳು, ಬಾಲವಿಕಾಸ ಸದಸ್ಯರುಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಗಿರಿಜ ಎಸ್ ಪ್ರಾರ್ಥಿಸಿದರು. ಆಶಾಕಾರ್ಯಕರ್ತೆ ರಮಾ  ಕೆ. ಸ್ವಾಗತಿಸಿ, ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಯಮುನಾ ಕೆ. ಕಾರ್ಯಕ್ರಮ ನಿರೂಪಿಸಿದರು.