ಆ.15: ಜಾಲ್ಸೂರು ಗ್ರಾ.ಪಂ. ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ಸ್ವಾತಂತ್ರ್ಯ ‌ನಡಿಗೆ

0

ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ

ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ನಡಿಗೆ ಹಾಗೂ ಸ್ವಾತಂತ್ರ್ಯೋತ್ಸವ ಆಚರಣೆಯು ಜಾಲ್ಸೂರು ಗ್ರಾಮ ಪಂಚಾಯತಿಯಲ್ಲಿ ಆ.15ರಂದು ನಡೆಯಲಿದೆ.
ಬೆಳಿಗ್ಗೆ 9ರಿಂದ ಜಾಲ್ಸೂರಿನ ಮುಖ್ಯ ಪೇಟೆಯಲ್ಲಿ ಎಲ್ಲಾ ವರ್ತಕರು, ರಿಕ್ಷಾ ಚಾಲಕರು, ವಾಹನ ಚಾಲಕರು ಹಾಗೂ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಬೃಹತ್ ಸ್ವಾತಂತ್ರ್ಯ ನಡಿಗೆಯು ಜಾಲ್ಸೂರಿನ ಗೋಳಿಕಟ್ಟೆಯಿಂದ ಪ್ರಾರಂಭಗೊಂಡು ಭಜನಾ ಮಂದಿರದ ತನಕ ಸಾಗಿ ಮರಳಿ ಗ್ರಾಮ ಪಂಚಾಯತಿ ವಠಾರಕ್ಕೆ ಆಗಮಿಸಲಿದೆ.
ಬಳಿಕ 9.30ಕ್ಕೆ ಗ್ರಾಮ ಪಂಚಾಯತಿಯ ಆವರಣದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಈ ಸಂದರ್ಭದಲ್ಲಿ ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ. ಸೇರಿದಂತೆ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರುಗಳು, ಜಾಲ್ಸೂರಿನ ಎಲ್ಲಾ ವರ್ತಕರುಗಳು, ಸ್ಥಳೀಯ ಅಟೋರಿಕ್ಷಾ ಚಾಲಕ, ಮಾಲಕರುಗಳು, ಸಂಜೀವಿನಿ ಸಂಘದ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರುಗಳು, ಅಂಗನವಾಡಿ ಕಾರ್ಯಕರ್ತೆಯರುಗಳು, ಆರೋಗ್ಯ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಲಿದ್ದಾರೆ ಎಂದು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here