ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ಪೂರ್ವಭಾವಿ ಸಭೆ

0

ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಮೂರ್ಜೆ (ಮೂರ್ಕಜೆ) ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ಆಶ್ರಯದಲ್ಲಿ ಮುಂಬರುವ ಅಕ್ಟೋಬರ್ 22ರಂದು ಗಣಪತಿ ಹವನ, ಸತ್ಯನಾರಾಯಣ ಪೂಜೆ ಮತ್ತು ಪರಮಪೂಜ್ಯ ಡಾ. ನಿರ್ಮಲಾನಂದ ಸ್ವಾಮೀಜಿಗೆ ಗುರುವಂದನಾ ಕಾರ್ಯಕ್ರಮ ಜರುಗಲಿದ್ದು, ಇದರ ಪೂರ್ವಭಾವಿ ಸಭೆಯು ಪುತ್ತೂರಿನ ತೆಂಕಿಲದಲ್ಲಿರುವ ಗೌಡ ಸಮುದಾಯ ಸಭಾಭವನದ ಚುಂಚಶ್ರೀ ಸಭಾಭವನದಲ್ಲಿ ಆ.14ರಂದು ಜರುಗಿತು.


ಮೂರ್ಜೆ ಮೂರ್ಕಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್ ನ ಅಧ್ಯಕ್ಷ ಗೋಪಾಲಕೃಷ್ಣ ಮೂರ್ಜೆ ಅಧ್ಯಕ್ಷತೆ ವಹಿಸಿದ್ದರು. ತರವಾಡು ಟ್ರಸ್ಟಿನ ಹಿರಿಯರಾದ ಮೋಹನ್ ಗೌಡ ಕಣಚ್ಚಾಲ್ ಮೂರ್ಜೆ ಅವರು ಪ್ರಸ್ತಾವನೆಗೈದರು.
ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಪಿ.ಎಂ. ಹರೀಶ್ ಮೂರ್ಜೆ, ಉಪಾಧ್ಯಕ್ಷ ನವೀನ ಮುರೂರು, ಹಿರಿಯರಾದ ಕೃಷ್ಣಪ್ಪ ಗೌಡ ಹಾಗೂ ಕುಶಾಲಪ್ಪ ಗೌಡ ಕುಂತೂರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮೂರ್ಜೆ ಮೂರ್ಕಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟಿನ ಎಲ್ಲಾ ವಿಭಾಗ ಸಂಚಾಲಕರುಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here