ಮಳೆ ಹಾನಿ ಪ್ರದೇಶ ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು, ಕಲ್ಮಕಾರು ಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

0

ಮಳೆ ದುರಂತದಿಂದ ಹಾನಿಗೊಳಗಾದ ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬೆಂಡೋಡಿ, ಹರಿಹರೇಶ್ವರ ದೇವಸ್ಥಾನ ಮತ್ತಿತರರ ಪ್ರದೇಶಗಳಿಗೆ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಅವರೊಂದಿಗೆ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್ ಅಂಗಾರ ಉಪಸ್ಥಿತರಿದ್ದರು.

ಈ ಸಂದರ್ಭ ಬಿಜೆಪಿಯ ಎ.ವಿ . ತೀರ್ಥರಾಮ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕಾರ್ಯದರ್ಶಿ ಮುಳಿಯ ಕೇಶವ ಭಟ್, ಗುತ್ತಿಗಾರು ಸೊಸೈಟಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಹರಿಹರ ಪಲ್ಲತಡ್ಕ ಗ್ರಾ.ಪಂ ಅಧ್ಯಕ್ಷ ಜಯಂತ ಬಾಳುಗೋಡು, ಉಪಾಧ್ಯಕ್ಷ ವಿಜಯ ಅಂಙಣ, ಮಾಜಿ ಅಧ್ಯಕ್ಷ ಹಿಮ್ಮತ್ ಕೆ ಸಿ, ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್‍ ಕುಮಾರ್ ಕೂಜುಗೋಡು, ಕೊಲ್ಲಮೊಗ್ರು ಗ್ರಾ.ಪಂ ಅಧ್ಯಕ್ಷ ಉದಯ ಕೊಪ್ಪಡ್ಕ, ರಾಧಾಕೃಷ್ಣ ಕಟ್ಟೆಮನೆ ಮತ್ತಿತರರು ಉಪಸ್ಥಿತರಿದ್ದರು.