ಪಂಜದಲ್ಲಿ ವಿಜೃಂಭಣೆಯ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆ- ಐಕ್ಯತೆಯ ನಡಿಗೆ

0

 

 

 

ಪಂಜ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಇದರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಪಂಜ ಮತ್ತು ಪಂಜ ಪರಿಸರ ವಿವಿಧ ಸಂಘ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಆ. 15 ರಂದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆ ಪ್ರಯುಕ್ತ ನಡೆದ ಐಕ್ಯತೆಯ ನಡಿಗೆ ವಿಶೇಷ ವಿಜೃಂಭಣೆಯಿಂದ ನಡೆಯಿತು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜಾರೋಹಣ ನಡೆದು ಬೃಹತ್ ಐಕ್ಯತೆಯ ನಡಿಗೆ ಪಂಜ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಹೊರಟು ಪಂಜ ಪೇಟೆಯ ಮೂಲಕ ಸಾಗಿ ಬಂತು.ಮೆರವಣಿಗೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು. ಚೆಂಡೆ, ಬ್ಯಾಂಡ್, ರಾಷ್ಟ್ರ ಧ್ವಜ ‌ಹಿಡಿದು ಮೆರವಣಿಗೆ ವಿಶೇಷ ಆಕರ್ಷಣೆಯಾಗಿತ್ತು. ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುಳ ಧ್ವಜಾರೋಹಣ ನೆರವೇರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು ನಿರೂಪಿಸಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.ಬಳಿಕ
ಸಭಾ ಕಾರ್ಯಕ್ರಮ ಜರುಗಲಿದೆ.

 

 

LEAVE A REPLY

Please enter your comment!
Please enter your name here