ಜಾಲ್ಸೂರು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ

0

ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಉಪಸ್ಥಿತಿ

ಜಾಲ್ಸೂರು ಗ್ರಾಮ ಪಂಚಾಯತಿ ವಠಾರದಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವನ್ನು ಆ.15ರಂದು ಆಚರಿಸಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, 75ನೇ ಅಮೃತ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರುಗಳಾದ ಸತೀಶ್ ಎನ್.ಎಂ. ಕೆಮನಬಳ್ಳಿ, ಪಿ. ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಅಬ್ದುಲ್ ಮಜೀದ್ ನಡುವಡ್ಕ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಶ್ರೀಮತಿ ಸಂಧ್ಯಾ ವಾಗ್ಲೆ ಅಡ್ಕಾರು, ವಿಜಯ ಅಡ್ಕಾರು, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಮುಜೀಬ್ ಪೈಚಾರು, ಶ್ರೀಮತಿ ಅಂಬಿಕಾ ಕುಕ್ಕಂದೂರು, ಶಿವಪ್ರಸಾದ್ ಕುಕ್ಕಂದೂರು, ಈಶ್ವರನಾಯ್ಕ ಸೋಣಂಗೇರಿ, ಶ್ರೀಮತಿ ದೀಪಾ ಅಜಕಳಮೂಲೆ ಸೇರಿದಂತೆ ಸಂಜೀವಿನಿ ಸಂಘದ ಪದಾಧಿಕಾರಿಗಳು, ಮಾಜಿ ಗ್ರಾ.ಪಂ. ಉಪಾಧ್ಯಕ್ಷ ದಿನೇಶ್ ಅಡ್ಕಾರು, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರುಗಳಾದ ಸುಖೇಶ್ ಅಡ್ಕಾರುಪದವು, ಗಣೇಶ್ ಅಂಬಾಡಿಮೂಲೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗ್ರಾ.ಪಂ‌. ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.