ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದಲ್ಲಿ 75ನೇ ಸ್ವಾತಂತ್ರ್ಯೋತ್ಸವ

0

 

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಘದ ಅಧ್ಯಕ್ಷರಾದ ಜನಾರ್ಧನ್ ಬಿ. ಕುರಿಂಜಭಾಗ್ ಧ್ವಜಾರೋಹಣ ನೆರವೇರಿಸಿದರು. ಸಂಘದ ಕಾರ್ಯದರ್ಶಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ನಾಯ್ಕ್ ಅಜ್ಜಾವರ ಮಾರ್ಗದರ್ಶನ ನೀಡಿದರು. ಸಂಘದ ಗೌರವಾಧ್ಯಕ್ಷ ಸೀತಾನಂದ ಬೇರ್ಪಡ್ಕ ಸೇರಿದಂತೆ ನಿರ್ದೇಶಕರು, ಮರಾಟಿ ಯುವ ವೇದಿಕೆಯ ಪದಾಧಿಕಾರಿಗಳು, ಮಹಿಳಾ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸಿತರಿದ್ದು, ಧ್ವಜವಂದನೆ ಸಲ್ಲಿಸಿದ ಬಳಿಕ ರಾಷ್ಟ್ರಗೀತೆಯನ್ನು ಹಾಡಿದರು.